ಅಮಿತ್ ಶಾರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ 10 ಕಾಂಗ್ರೆಸ್ ಶಾಸಕರು

ಅಮಿತ್ ಶಾರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ 10 ಕಾಂಗ್ರೆಸ್ ಶಾಸಕರು

ದೆಹಲಿ:  ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೋವಾ 10 ಮಂದಿ ಕಾಂಗ್ರೆಸ್ ಶಾಸಕರು ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‍ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. 

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ದೆಹಲಿ ತಲುಪಿರುವ ಹತ್ತು ಮಾಜಿ ಕಾಂಗ್ರೆಸ್ ಶಾಸಕರು ಇಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿದ ಗೋವಾ ಸಿಎಂ ಪ್ರಮೋದ್ ಸಾವಂತ್, ಬಿಜೆಪಿಗೆ ಸೇರ್ಪಡೆಯಾದ 10 ಗೋವಾ ಕಾಂಗ್ರೆಸ್ ಶಾಸಕರು ಗುರುವಾರ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದರು.

ಗೋವಾ ವಿಧಾನಸಭೆಯಲ್ಲಿ ಒಟ್ಟು 40 ಸದಸ್ಯರಿದ್ದಾರೆ - 17 (ಬಿಜೆಪಿ), 15 (ಕಾಂಗ್ರೆಸ್), 1 (ಎನ್‌ಸಿಪಿ), 1 (ಮಹಾರಾಷ್ಟ್ರವಾಡಿ ಗೋಮಂಟಕ್ ಪಕ್ಷ), 3 (ಗೋವಾ ಫಾರ್ವರ್ಡ್ ಪಕ್ಷ) ಮತ್ತು 3 (ಸ್ವತಂತ್ರ). 10 ಕಾಂಗ್ರೆಸ್ ಶಾಸಕರನ್ನು ಸೇರ್ಪಡೆಗೊಳಿಸುವುದರೊಂದಿಗೆ, ಬಿಜೆಪಿಯ ಬಲ ಈಗ 27 ಕ್ಕೆ ಏರಿದೆ.