ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಭಾರತದ ಪಾಲಿಗೆ 150ಕ್ಕೂ ಹೆಚ್ಚಿನ ಪದಕ

ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಭಾರತದ ಪಾಲಿಗೆ 150ಕ್ಕೂ ಹೆಚ್ಚಿನ ಪದಕ

ಕಠ್ಮಂಡುವಿನಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ  152 ಪದಕಗಳನ್ನು ಪೂರೈಸಿದೆ. ಇದುವರೆಗೆ 74 ಚಿನ್ನ, 53 ಬೆಳ್ಳಿ ಮತ್ತು 25 ಕಂಚಿನ ಪದಕಗಳನ್ನು ಭಾರತ ಗೆದ್ದಿದೆ. 

152 ಪದಕಗಳ ಮೂಲಕ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಇಲ್ಲಿಯವರೆಗೆ ಭಾರತ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ನೇಪಾಳ 39 ಚಿನ್ನ, 27 ಬೆಳ್ಳಿ ಮತ್ತು 46 ಕಂಚಿನ ಪದಕಗಳನ್ನು ಒಳಗೊಂಡಂತೆ 112 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ 22 ಚಿನ್ನ, 39 ಬೆಳ್ಳಿ ಮತ್ತು 63 ಕಂಚಿನ ಪದಕಗಳನ್ನು ಒಳಗೊಂಡಂತೆ 124 ಪದಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, 18 ಚಿನ್ನ, 25 ಬೆಳ್ಳಿ ಮತ್ತು 28 ಕಂಚಿನ ಪದಕಗಳನ್ನು ಒಳಗೊಂಡಂತೆ 71 ಪದಕಗಳೊಂದಿಗೆ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ.