ಕೇಂದ್ರ ಸರ್ಕಾರ ಕೆಲಸ ಕೇಳಿದ ಯುವಕರಿಗೆ ಚಂದ್ರನನ್ನು ತೋರಿಸುತ್ತಿದೆ:ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಕೆಲಸ ಕೇಳಿದ ಯುವಕರಿಗೆ ಚಂದ್ರನನ್ನು ತೋರಿಸುತ್ತಿದೆ:ರಾಹುಲ್ ಗಾಂಧಿ

ಮುಂಬೈ:ಕೇಂದ್ರ ಸರ್ಕಾರ ಕೆಲಸ ಕೇಳಿದ ಯುವಕರಿಗೆ ಚಂದ್ರನನ್ನು ತೋರಿಸುತ್ತಿದೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದಾರೆ.

ಇಂದು ಮಹಾರಾಷ್ಟ್ರದ ಲಾತೂರ್ ನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ,ಯುವಕರು ಕೇಂದ್ರ ಸರ್ಕಾರವನ್ನು ಕೆಲಸದ ಬಗ್ಗೆ  ಕೇಳಿದಾಗ,ಬಿಜೆಪಿ ಸರ್ಕಾರ ಚಂದ್ರನ ಕಡೆ ತೋರಿಸುತ್ತಾರೆ. ದೇಶದ ಜನರನ್ನು ಬೇರೆ ಕಡೆ  ಸೆಳೆಯುತ್ತಾರೆ ಎಂದು  ಬಿಜೆಪಿ ಮೇಲೆ ಕಿಡಿಕಾರಿದರು.

ಇತ್ತೀಚಿಗೆ ಪ್ರಧಾನಿ ಮೋದಿ ಅವರು, ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದರು, ಈ ಭೇಟಿಯಲ್ಲಿ ಅವರು 2017 ಚೀನಾದ ಸೈನ್ಯ ಭಾರತೀಯ ಭೂಪ್ರದೇಶದ ಮೇಲೆ ಆಕ್ರಮಣ ಮಾಡಿದರ ಬಗ್ಗೆ ಕೇಳಿಲ್ಲ. ಮೋದಿ ಅವರು ಮೇಕ್ ಇನ್ ಇಂಡಿಯಾ ಮಾಡುತ್ತಿಲ್ಲ.ಬದಲಾಗಿ ಮೇಕ್ ಇನ್ ಚೀನಾ ಮಾಡುತ್ತಿದ್ದಾರೆ ಎಂದು ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು.

ದೇಶದ ಜನ ಉದ್ಯೋಗ ಮತ್ತು ಸಮಸ್ಯೆಗಳ ಬಗ್ಗೆ ಕೇಳಿದಾಗ,ಚಂದ್ರಯಾನ,370ನೇ ವಿಧಿ ರದ್ದು ಈ ರೀತಿಯ ವಿಚಾರಗಳನ್ನು ತೋರಿಸಿ ಜನರ ಗಮನವನ್ನು ಬೇರೆ ಕಡೆ ಸೆಳೆಯುವುದು,ಮೋದಿ ಮತ್ತು ಅಮಿತ್ ಶಾ ಅವರ ಕೆಲಸವಾಗಿದೆ. 370ನೇ ವಿಧಿ ಮತ್ತು ಚಂದ್ರಯಾನದ ಬಗ್ಗೆ ಸದಾ ಮಾತನಾಡುವ ಕೇಂದ್ರ ಸರ್ಕಾರ ದೇಶದ ಸಮಸ್ಯೆ ಬಗ್ಗೆ ಮೌನ ವಹಿಸಿದೆ ಎಂದು ಕಿಡಿಕಾರಿದರು.