ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ ಬಿಎಸ್ ಯಡಿಯೂರಪ್ಪ

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮುಂಬರುವ ಉಪಚುನಾವಣೆ ಹಿನ್ನೆಲೆ ಎದ್ದಿರುವ ಅಸಮಾಧಾನವನ್ನು ಶಮನ ಮಾಡಲು ಮುಖ್ಯಮಂತ್ರಿ ಬಿಎಸ್‍ ಯಡಿಯೂರಪ್ಪ ಅವರು 8 ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಿಗೆ ನೀಡಿದ್ದಾರೆ.

ಬಿಜೆಪಿಯಲ್ಲಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಹೊಸಕೋಟೆಯಲ್ಲಿ ಬಂಡಾಯ ಎದ್ದಿದ್ದ ಶರತ್‍ ಬಚ್ಚೇಗೌಡ ಅವರಿಗೆ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.  ಅಶೋಕ್ ಪೂಜಾರಿ ಅವರಿಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು – ಗೋಕಾಕ್, ಬೆಳಗಾವಿ, ರಾಜು ಕಾಗೆ ಅವರಿಗೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ: ಕಾಗವಾಡ, ಬೆಳಗಾವಿ ಮತ್ತು ಯು.ಬಿ. ಬಣಕಾರ್ ಅವರಿಗೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣ ನಿಗಮ: ಹಿರೇಕೆರೂರು, ಹಾವೇರಿ ಜಿಲ್ಲೆ ಯನ್ನು ನೀಡಲಾಗಿದೆ.

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ತುಂಗ ಭದ್ರ ಯೋಜನೆ) ಮಸ್ಕಿ, ರಾಯಚೂರು ನಿಗಮವನ್ನು ಬಸನಗೌಡ ತುರವಿಹಾಳ ಅವರಿ ನೀಡಲಾಗಿದೆ. ವಿಎಸ್ ಪಾಟೀಲ: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ- ಹುಬ್ಬಳ್ಳಿ, ಹೆಚ್.ಆರ್. ಗವಿಯಪ್ಪ ಅವರಿಗೆ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ, ಬೆಂಗಳೂರು, ನಂದೀಶ್ ರೆಡ್ಡಿ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ – ಬೆಂಗಳೂರು ಸ್ಥಾನವನ್ನು ನೀಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿನ 8 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಪರಾಜಿತ ಅಭ್ಯರ್ಥಿಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ. ಉಪಚುನಾವಣಾ ಟಿಕೆಟ್ ವಿಚಾರದಲ್ಲಿ ಅನರ್ಹ ಶಾಸಕರಿಗಿದ್ದ ಆತಂಕವನ್ನು ಸರ್ಕಾರ ದೂರ ಮಾಡಿದೆ.