ನಿರ್ಮಾಪಕ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣು

ನಿರ್ಮಾಪಕ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣು

 ಡಾ. ರಾಜ್ ಕುಮಾರ್ ಕುಟುಂಬಕ್ಕೆ ಆಪ್ತಾರಾಗಿದ್ದ ನಿರ್ಮಾಪಕ ಹಾಗೂ ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಸಮೀಪ ಸುಪ್ರೀಂ ಹೋಟೆಲ್ ನಲ್ಲಿ ಉದ್ಯಮಿ ಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಸುಪ್ರೀಂ ಹೋಟೆಲ್ ಕಪಾಲಿ ಮೋಹನ್ ಅವರ ಒಡೆತನದ ಹೋಟೆಲ್ ಆಗಿದೆ. 

ಇದುವರೆಗೂ ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಸಧ್ಯ ಸ್ಥಳಕ್ಕೆ  ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.