ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕೇಂದ್ರ, ಬಿಜೆಪಿ ನಾಯಕರ ಪ್ರಚೋದನೆ ಎಂದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕೇಂದ್ರ,  ಬಿಜೆಪಿ ನಾಯಕರ ಪ್ರಚೋದನೆ ಎಂದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮತ್ತು ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಕರಾಳ ದಿನ ಆಚರಿಸಿತು. ಆದರೆ, ಪಶ್ಚಿಮ ಬಂಗಾಳದಲ್ಲಿ ಗಲಭೆಗಳು ಮುಂದುವರಿಯಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ವಿವಿಧ ಸಮಾಜೀಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡಲು ಬಿಜೆಪಿ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಚಾರವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ, ಇದರ ಮೂಲಕ ನನ್ನ ಧ್ವನಿಯನ್ನು ಹಡಗಿಸಲು ಪ್ರಯತ್ನಸುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಬಶೀರ್‌ಘಾಟ್ ವಲಯದಲ್ಲಿ 12 ಗಂಟೆ ಬಂದ್ ಆಚರಿಸಲಾಯಿತು. ಬಹುತೇಕ ಕಡೆ ರ್ಯಾಲಿ ನಡೆಯಿತು. ಬಿಜೆಪಿ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿದ್ದರು. ಹಲವು ಆರೋಪಿಗಳನ್ನು ತಕ್ಷಣ ಬಂಧಿ ಸುವಂತೆ ಕಾರ್ಯಕರ್ತರು ಆಗ್ರಹಿಸಿದರು.