ಸರ್ಕಾರ ನಡೆಸುವ ಅನಿವಾರ್ಯತೆಯಿಂದ ಲಾಕ್‌ಡೌನ್ ಸಡಿಲಿಕೆ ಮಾಡಿ ಎಡವಿತಾ ಸರ್ಕಾರ.?

ಸರ್ಕಾರ ನಡೆಸುವ ಅನಿವಾರ್ಯತೆಯಿಂದ ಲಾಕ್‌ಡೌನ್ ಸಡಿಲಿಕೆ ಮಾಡಿ ಎಡವಿತಾ ಸರ್ಕಾರ.?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೋನಾ ಮಹಾಮಾರಿ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ದೇಶದಲ್ಲಿ ಲಕ್ಷಕ್ಕೆ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತ ಕರ್ನಾಟಕದಲ್ಲಿ ಇಂದು ಒಂದೇ ದಿನ 127 ಕೊರೊನಾ ಕೇಸ್ ದಾಖಲಾಗಿದ್ದು, 24 ಗಂಟೆಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಇದೀಗ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಮತ್ತಷ್ಟು ಭೀತಿ ಎದುರಾಗಿದೆ.

ಕೊರೋನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಮೂರನೇ ಹಂತದ ಲಾಕ್ಡೌನ್ ಮೇ 17ರಂದು ಅಂತ್ಯಗೊಂಡಿದ್ದು, ನಾಲ್ಕನೇ ಹಂತದ ಲಾಕ್‌ಡೌನ್ ಪ್ರಾರಂಭವಾಗಿದೆ.

ಇದರ ಮಧ್ಯೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ವಿನಾಯಿತಿಗಳನ್ನು ನೀಡಿದ್ದು, ಇದರಿಂದಾಗಿ ಸಾರ್ವಜನಿಕರ ಸಂಚಾರದ ಜೊತೆಗೆ ಆರ್ಥಿಕ ಚಟುವಟಿಕೆಗಳು ಬಹುತೇಕ ಎಲ್ಲವೂ ಆರಂಭವಾಗಿವೆ. ಹೀಗಿರುವಾಗ ಸರ್ಕಾರ ನಡೆಸುವ ಸಲುವಾಗಿ ಲಾಕ್ ಡೌನ್ ಸಡಿಲಿಕೆ ಮಾಡಿ ಎಡವಿತಾ ಸರ್ಕಾರ ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ಸಡಿಲಿಕೆಯ ನಂತರ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಇದಕ್ಕೆ ಕಾರಣ.

ಲಾಕ್ ಡೌನ್ ಸಡಿಲಿಕೆ ಮಾಡಿದ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದರೂ ಆರ್ಥಿಕ ಸಂಕಷ್ಟ ಸರ್ಕಾರಕ್ಕೆ ತಲೆನೋವಾಗಿದೆ. ಹೀಗಾಗಿಯೇ ಸರ್ಕಾರ ಅನಿವಾರ್ಯವಾಗಿ ಲಾಕ್ ಡೌನ್ ಸಡಿಲಿಕೆ ಮಾಡುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಸಡಿಲಿಕೆಯ ಪರಿಣಾಮವಾಗಿ ಕೊರೋನ ಸೋಂಕಿತರ ಸಂಖ್ಯೆ ಏರಿಕೆಯಾದರೆ ಎಂಬ ಭೀತಿ ಇದೆ. ಇತ್ತ ಅಂತರ್ ಜಿಲ್ಲೆ ಓಡಾಟಕ್ಕೆ ಅವಕಾಶ ನೀಡಲಾಗಿದೆ.

ಜೊತೆಗೆ ವಲಸೆ ಕಾರ್ಮಿಕರಿಗಾಗಿ ಅಂತರ್ ರಾಜ್ಯ ಸಂಚಾರ ವ್ಯವಸ್ಥೆ ಆಗಿರುವುದರಿಂದ ಸೋಂಕು ಹರಡುವಿಕೆ ಹೆಚ್ಚಾಗಬಹುದು. ಇತ್ತೀಚಿನ ವರದಿಗಳ ಪ್ರಕಾರ ಲಾಕ್ ಡೌನ್ ಸಡಿಲಿಕೆ ಬಳಿಕ ಹೊರ ರಾಜ್ಯದಿಂದ ಬಂದವರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಪೀಡಿತರಾಗಿದ್ದಾರೆ, ಹೀಗಾಗಿ ಸಡಿಲಿಕೆಯಿಂದ ಮುಂದೆ ಸಂಕಷ್ಟ ಎದುರಾಗಲಿದೆ ಎಂದು ಅಂದಾಜಿಸಲಾಗುತ್ತಿದೆ.