ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್ ಗೆ ಚಾಲನೆ ನೀಡಿದ ಬಿಬಿಎಂಪಿ

ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್ ಗೆ ಚಾಲನೆ ನೀಡಿದ ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ಉದ್ದೇಶದಿಂದ ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್(ಪ್ರತಿಜನಕ ಪರೀಕ್ಷೆ)ಗೆ ಇಂದು ಚಾಲನೆ ದೊರೆತಿದೆ. 

ಈ ಮೂಲಕ ಇನ್ನು ಮುಂದೆ 10 ನಿಮಿಷದಲ್ಲಿ ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಇಂದು ಮಹಾಪೌರರು, ಉಪಮಹಾಪೌರರಾದ ರಾಮಮೋಹನ ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜು.ಜಿ, ಆಯುಕ್ತರಾದ ಬಿ.ಹೆಚ್.ಅನಿಲ್ ಕುಮಾರ್ ರವರು ಇಂದು ಬೆಳಗ್ಗೆ ಚಾಲನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ 198 ವಾರ್ಡ್ ಗಳಲ್ಲಿ ಪ್ರಮುಖವಾಗಿ ILI/SARI ಲಕ್ಷಣಗಳಿರುವ, ಕಂಟೈನ್ಮೆಂಟ್ ಪ್ರದೇಶ, ಕೊಳಗೇರಿ ಪ್ರದೇಶ ಹಾಗೂ ಪೌರಕಾರ್ಮಿಕರ ಕಾಲೋನಿಗಳಲ್ಲಿ ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್ ನಡೆಸಲು ಇಂದು ಚಾಲನೆ ನೀಡಲಾಗಿದೆ. ಇದಕ್ಕಾಗಿ ವಲಯವಾರು ಓಲಾ ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ವಾಹನದಲ್ಲಿ ಮೂರು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.