ನಾಳೆಯಿಂದ ದ.ಕ. ಜಿಲ್ಲೆಯಲ್ಲಿ ಎಲ್ಲವೂ ಬಂದ್ : ಸಂಸದ ನಳಿನ್ ಕುಮಾರ್

ನಾಳೆಯಿಂದ ದ.ಕ. ಜಿಲ್ಲೆಯಲ್ಲಿ ಎಲ್ಲವೂ ಬಂದ್ : ಸಂಸದ ನಳಿನ್ ಕುಮಾರ್

ಮಂಗಳೂರು : ಕೊರೋನ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಜನರು ಅದನ್ನು ಪಾಲಿಸದ ಕಾರಣ ನಾಳೆಯಿಂದ ಎಲ್ಲವೂ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಮನೆಗಳಿಗೆ, ಅಪಾರ್ಟ್‌ಮೆಂಟ್ ಗಳಿಗೆ ಹೇಗೆ ತಲುಪಿಸುವುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಜನರು ಮಾರುಕಟ್ಟೆ, ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದರಿಂದ ಈ ಕ್ರಮ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.