ಭಾರತದಲ್ಲಿ ಇಬ್ಬರು ಕೊರೊನಾ ವೈರಸ್ ಸೋಂಕಿತರು ಗುಣಮುಖ

ಭಾರತದಲ್ಲಿ ಇಬ್ಬರು ಕೊರೊನಾ ವೈರಸ್ ಸೋಂಕಿತರು ಗುಣಮುಖ

ಮುಂಬೈ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಂದು ಕಡೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದರ ನಡುವೆ ವೈದ್ಯರ ಪರಿಶ್ರಮಯಿಂದ ಇಬ್ಬರು ಕೊರೊನಾ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಮಹಾರಾಷ್ಟ್ರದಲ್ಲಿ ಎರಡು ವಾರಗಳ ಹಿಂದೆ ಕೊರೊನಾ ವೈರಸ್ ಪಾಸಿಟಿವ್ ಫಲಿತಾಂಶ ಬಂದಿದ್ದ ಇಬ್ಬರು ಸೋಂಕಿತರನ್ನು ಚಿಕಿತ್ಸೆಗೆ ಒಳಪಡಿಸಲಾಯಿತು. ಬುಧವಾರ ಅದೇ ಸೋಂಕಿತರನ್ನು ಮರು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ನೆಗಟಿವ್ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಮೊದಲಿನ ಇಬ್ಬರು ಕೊರೊನಾ ವೈರಸ್ ಸೋಂಕಿತರಿಗೆ ನೀಡಿದ ವೈದ್ಯಕೀಯ ಚಿಕಿತ್ಸೆ ಯಶಸ್ವಿಯಾಗಿದ್ದು, ಹೊಸ ಭರವಸೆಯನ್ನು ಮೂಡಿಸಿದೆ. ಕೊರೊನಾ ಸೋಂಕಿತರು ಗುಣಮುಖರಾದ ಹಿನ್ನೆಲೆಯಲ್ಲಿ ಇಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.