ದಕ್ಷಿಣ ಆಫ್ರಿಕಾ ವಿರುದ್ಧ ವಿಶೇಷ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್ !

ದಕ್ಷಿಣ ಆಫ್ರಿಕಾ ವಿರುದ್ಧ ವಿಶೇಷ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್ !

ಪುಣೆ :ಭಾರತ ಮತ್ತು ದಕ್ಷಿಣಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ತೃತೀಯ ದಿನ ಭಾರತದ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆ ಮಾಡಿದ್ದಾರೆ.

 ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ ಅಶ್ವಿನ್ 4 ವಿಕೆಟ್ ಕಬಳಿಸಿದ್ದಾರೆ.ಈ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 50 ಕ್ಕೇರಿಸಿದ್ದಾರೆ. ಈ ಮೂಲಕ ಆಫ್ರಿಕಾ ವಿರುದ್ಧ 50ಕ್ಕಿಂತ ಹೆಚ್ಚು ವಿಕೆಟ್ ಗಳಿಸಿದ ನಾಲ್ಕನೇ ಭಾರತೀಯ ಬೌಲರ್ ಎನಿಸಿದ್ದಾರೆ.

ಇದಕ್ಕೂ ಮೊದಲು ಅನಿಲ್ ಕುಂಬ್ಳೆ,ಹರ್ಭಜನ್ ಸಿಂಗ್ ಮತ್ತು ಜಾವಗಲ್ ಶ್ರೀನಾಥ್ ಈ ದಾಖಲೆ ಮಾಡಿದ್ದರು .84 ವಿಕೆಟ್ ಗಳೊಂದಿಗೆ ಅನಿಲ್ ಕುಂಬ್ಳೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.