ವಾಯು ಚಂಡಮಾರುತ: ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ

ವಾಯು ಚಂಡಮಾರುತ: ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ

ಗುಜರಾತ್ : ಗುಜರಾತ್ ಕರಾವಳಿ ತೀರಕ್ಕೆ ವಾಯು ಚಂಡಮಾರುತ ಅಪ್ಪಳಿಸಲಿದ್ದು, ಕರಾವಳಿ ತೀರದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಗುಜರಾತ್ ನ ಕರಾವಳಿ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ವಾಯುಚಂಡಮಾರುತ ಗುಜರಾತ್ ನ ವೆರವಲ್ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ವಾಯು ಚಂಡಮಾರುತ 135ರಿಂದ 140 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು. ವಾಯು ಚಂಡಮಾರುತದಿಂದಾಗಿ ಗುಜರಾತ್ ಕಚ್, ಜಾಮ್ ನಗರ್, ಜುನಾಘಡ್, ದೇವ್ ಭೂಮಿ, ಪೋರ್ ಬಂದರ್, ರಾಜ್ ಕೋಟ್, ಅಮ್ರೇಲಿ, ಭಾವ್ ನಗರ್ ಮತ್ತು ಗಿರ್, ಸೋಮನಾಥ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. 

ವಾಯು ಚಂಡಮಾರುತ ಹಿನ್ನೆಲೆ ಕರಾವಳಿ ತೀರದ ಜನರನ್ನು ಸ್ಥಳಾಂತರಿಸುವ ಕೆಲಸ ಭರದಿಂದ ಸಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಪೋರ್ ಬಂದರ್, ಮಹುವಾ, ವೆರವಲ್ಸಡ್ತು ಪ್ರಾಂತ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಗುಜರಾತ್ ನ ಕಚ್ ನಿಂದ ದಕ್ಷಿಣ ಗುಜರಾತ್ ವರೆಗಿನಗ ಎಲ್ಲ ಕರಾವಳಿತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  

ಗುಜರಾತ್ ಸಿಎಂ ವಿಜಯ್ ರೂಪಾನಿ ಚಂಡಮಾರುತ ಹಿನ್ನಲೆಯಲ್ಲಿ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಕರಾವಳಿ ತೀರದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.