ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

ಬೆಂಗಳೂರು:ಕಾಂಗ್ರೆಸ್ ನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಕೇವಲ 2 ಸ್ಥಾನಗಳನ್ನು ಗೆಲ್ಲುವ ಮೂಲಕ ತೀವ್ರ ಮುಖಭಂಗಕ್ಕೆ ಕಾರಣವಾದ ಹಿನ್ನೆಲೆ ಸೋಲಿನ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷನಾಗಿ ಪ್ರಜಾಪ್ರಭುತ್ವದಲ್ಲಿ ಜನತಾ ನ್ಯಾಯಾಲಯದ ತೀರ್ಪಿಗೆ ಗೌರವ ಸಲ್ಲಿಸುತ್ತೇನೆ. ಉಪಚುನಾವಣೆಯಲ್ಲಿ ಗೆಲ್ಲಲು ಶಕ್ತಿಮೀರಿ ಪ್ರಯತ್ನ ಮಾಡಿದ್ದೆವು, ಆದರೆ ಈಗ ಚುನಾವಣೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಿದ್ದೇನೆ  ಸೋನಿಯಾ ಗಾಂಧಿ ಅವರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.