ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಸಾಲ ಒಂದೇ ಕಂತಿನಲ್ಲಿ ಬಿಡುಗಡೆಗೆ ಸಿಎಂ ಕುಮಾರಸ್ವಾಮಿ ಆದೇಶ

ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಸಾಲ ಒಂದೇ ಕಂತಿನಲ್ಲಿ ಬಿಡುಗಡೆಗೆ ಸಿಎಂ ಕುಮಾರಸ್ವಾಮಿ ಆದೇಶ

ಬೆಂಗಳೂರು: ರೈತರ ಬೆಳೆ ಸಾಲಮನ್ನಾ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ವಾಣಿಜ್ಯ ಬ್ಯಾಂಕುಗಳಿಂದ ರೈತರು ಪಡೆದಿರುವ ಬೆಳೆ ಸಾಲಮನ್ನಾವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಸಿಎಂ ಕುಮಾರಸ್ವಾಮಿ ಆದೇಶಿಸಿದ್ದಾರೆ.

ಮಂಗಳವಾರ ನಡೆದ ಸಭೆಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಎಲ್ಲಾ ಬೆಳೆ ಸಾಲಗಳನ್ನೂ ಏಕ ಕಾಲದಲ್ಲಿ  ಮನ್ನಾ ಮಾಡುವಂತೆ ಸಿಎಂ ಕುಮಾರಸ್ವಾಮಿ ಆದೇಶಿಸಿದ್ದಾರೆ.

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.

ಅದರ ಪ್ರತಿ ಇಲ್ಲಿದೆ- pic.twitter.com/KjSGk2idiE

— CM of Karnataka (@CMofKarnataka) June 12, 2019


ವಾಣಿಜ್ಯ ಬ್ಯಾಂಕುಗಳಿಂದ ರೈತರು ಪಡೆದಿರುವ ಬೆಳೆ ಸಾಲಮನ್ನಾ ಯೋಜನೆಗೆ ಸಂಬಂಧಿಸಿದಂತೆ, ಅರ್ಹತೆ ಹೊಂದಿರುವ ಓವರ್ ರಿಸ್ಟ್ರಕ್ಚರ್ಡ್ ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳನ್ನು ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ.