ಎಸ್.ಎಂ ಕೃಷ್ಣರನ್ನು ಭೇಟಿ ಮಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್

ಎಸ್.ಎಂ ಕೃಷ್ಣರನ್ನು ಭೇಟಿ ಮಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣರನ್ನು ಭೇಟಿಯಾಗಿ ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ಎಸ್.ಎಂ.ಕೆ ಜೊತೆ ಚರ್ಚೆ ನಡೆಸಿದ್ದಾರೆ.

ಸಂಕ್ರಾಂತಿ ಹಬ್ಬಕ್ಕೆ ಶುಭ ಕೋರುವ ನೆಪದಲ್ಲಿ ಸದಾಶಿವನಗರದ ಎಸ್.ಎಂ ಕೃಷ್ಣ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಕೆಪಿಸಿಸಿ ನೂತನ ಸಾರಥಿಯ ಆಯ್ಕೆ ಕುರಿತು ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಭೇಟಿ ಕುತೂಹಲ ಮೂಡಿಸಿದೆ.

ಭೇಟಿ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ಸಂಕ್ರಾಂತಿ ಹಬ್ಬಕ್ಕೆ ಶುಭಕೋರಲು ಎಸ್.ಎಂ ಕೃಷ್ಣ ಅವ್ರನ್ನ ಭೇಟಿ ಮಾಡಿದೆ. ಇದು ವೈಯಕ್ತಿಕ ಭೇಟಿಯೇ ಹೊರತು ಯಾವುದೇ ರಾಜಕೀಯ ಉದ್ದೇಶದಿಂದ ಅಲ್ಲ. ನನ್ನ, ಅವರ ಸಂಬಂಧದ ಬಗ್ಗೆ ಎಲ್ಲರಿಗೂ ಕೂಡ ಗೊತ್ತಿದೆ. ರಾಜಕೀಯ ಮಾಡೋರು ಮಾಡಲಿ ಬಿಡಿ ಎಂದು ಹೇಳಿದರು.