ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಸೂಚನೆ

ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಮತ್ತು ಉತ್ತರದ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹಾಸನ, ಕೊಡಗು, ಚಾಮರಾಜನಗರ,  ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ,ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ‍್ಯತೆ ಇದೆ ಎಂದು ತಿಳಿಸಿದೆ.

ಭಾರಿ ಮಳೆಯಿಂದಾಗಿ 22 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ವರದಿಯ ಪ್ರಕಾರ, ಬೆಳಗಾವಿ ಜಿಲ್ಲೆಯಲ್ಲಿ 15 ಜನರು ಸಾವನ್ನಪ್ಪಿದ್ದು, 14 ಜನರು ಕಾಣೆಯಾಗಿದ್ದಾರೆ.  ಪ್ರವಾಹ ಪೀಡಿತರನ್ನು ರಕ್ಷಿಸಲು  ನಿಯೋಜಿಸಲಾಗಿದ್ದ ಎನ್ ಡಿ ಆರ್ ಎಫ್ ತಂಡಗಳು ಇದುವರೆಗೂ 7 ಲಕ್ಷ ಜನರನ್ನು ರಕ್ಷಣೆ ಮಾಡಿದೆ ಎಂದು ವರದಿ ತಿಳಿಸಿದೆ.