ನನಗೆ ಕೊರೋನಾ ಪಾಸಿಟಿವ್ ಬಂದಿದೆ ಎಂಬುದು ಸುಳ್ಳು ಸುದ್ದಿ : ದರ್ಶನ್ ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ

ನನಗೆ ಕೊರೋನಾ ಪಾಸಿಟಿವ್ ಬಂದಿದೆ ಎಂಬುದು ಸುಳ್ಳು ಸುದ್ದಿ : ದರ್ಶನ್ ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ

ಕಿಲ್ಲರ್ ಕೊರೋನಾ ಅಟ್ಟಹಾಸ ರಾಜ್ಯದಲ್ಲಿ ಮುಂದುವರೆದಿದ್ದು, ಈ ಮಧ್ಯೆ ಸ್ಯಾಂಡಲ್ ವುಡ್ ಕಲಾವಿದರಿಗೂ ಕೊರೋನಾ ಭೀತಿ ಆವರಿಸಿದೆ. ಕಿಚ್ಚ ಸುದೀಪ್ ಅವರ ಪಕ್ಕದ ಮನೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಆ ಏರಿಯಾವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ ಮೆಂಟ್ ನಲ್ಲೂ ಕೊರೋನಾ ತಗುಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಸ್ವತಃ ವಿಜಯಲಕ್ಷ್ಮಿ ಅವರೇ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯಲಕ್ಷ್ಮಿ ನನಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನುವ ವದಂತಿ ಹರಿದಾಡುತ್ತಿದೆ. ಇದು ಸುಳ್ಳು. ನಾನು ಕ್ಷೇಮವಾಗಿದ್ದೀನಿ ಎಲ್ಲರೂ ಈ ಕಷ್ಟದ ಸಮಯದಲ್ಲಿ ಸುರಕ್ಷಿತವಾಗಿರಿ. ಎಂದು ಹೇಳುವ ಮೂಲಕ ಹರಿದಾಡುತ್ತಿದ್ದ ಸುಳ್ಳು ಸುದ್ದಿಗೆ ತೆರೆ ಎಳೆದಿದ್ದಾರೆ.

ದರ್ಶನ್ ಮತ್ತು ವಿಜಯಲಕ್ಷ್ಮಿ ಹೊಸಕೆರೆಹಳ್ಳಿಯಲ್ಲಿರುವ ಪ್ರಸ್ಟೀಜ್ ಅಪಾರ್ಟ್ ಮೆಂಟ್ ನಲ್ಲಿ ಕೆಲ ವರ್ಷಗಳಿಂದ ಇದೆ ಅಪಾರ್ಟ್ ಮೆಂಟ್ ನಲ್ಲೇ ವಾಸವಿದ್ದಾರೆ. ಈ ಅಪಾರ್ಟ್ ಮೆಂಟ್ ನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.