ಉಗ್ರರಿಗೆ ಆಶ್ರಯ ನೀಡಿದ್ದ ಡಿವೈಎಸ್ಪಿ ದವೀಂದರ್ ಸಿಂಗ್ ಸೇವೆಯಿಂದ ಅಮಾನತು

ಉಗ್ರರಿಗೆ ಆಶ್ರಯ ನೀಡಿದ್ದ ಡಿವೈಎಸ್ಪಿ ದವೀಂದರ್ ಸಿಂಗ್ ಸೇವೆಯಿಂದ ಅಮಾನತು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದವೀಂದರ್ ಸಿಂಗ್ ಅವರು ಶ್ರೀನಗರದ ತಮ್ಮ ನಿವಾಸದಲ್ಲಿಯೇ ಮೂವರು ಉಗ್ರರಿಗೆ ಆಶ್ರಯ ನೀಡಿದ್ದಾರೆ ಎಂದು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ದವೀಂದರ್ ಸಿಂಗ್ ಅವರೊಂದಿಗೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ಘಟಕದ ಮುಖ್ಯ ಕಚೇರಿ ಬಳಿಯ ತನ್ನ ಮನೆಯಲ್ಲೇ ಉಗ್ರರಿಗೆ ಆಶ್ರಯ ನೀಡಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ. ಪೊಲೀಸ್ಮತ್ತು ಗುಪ್ತದಳದ ಅಧಿಕಾರಿಗಳು ಸತತವಾಗಿ ಅವರನ್ನು ತನಿಖೆಗೆ ಒಳಪಡಿಸಿದ್ದು, ಅವರನ್ನು ಡಿವೈಎಸ್ಪಿ ಆಗಿ ನಿಯೋಜಿಸಿದ್ದ ಶ್ರೀನಗರ ವಿಮಾನ ನಿಲ್ದಾಣ ಬಳಿಯ ಕಚೇರಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅಪಹರಣ ವಿರೋಧಿ ದಳದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದು ಸುಮಾರು ನಾಲ್ಕು ತಿಂಗಳ ಹಿಂದೆ ದೇವೇಂದ್ರ ಸಿಂಗ್ ಅವರಿಗೆ ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿತ್ತು.

ದೇವೇಂದ್ರ ಸಿಂಗ್ ಅವರ ಮನೆಯಲ್ಲಿ ಶೋಧಿ ನಡೆಸಿದ್ದು, ಎರಡು ಪಿಸ್ತೂಲ್, ಒಂದು ಎಕೆ ರೈಫಲ್ ಅಲ್ಲದೇ ಭಾರಿ ಪ್ರಮಾಣದ ಸ್ಟೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.