ಮುಸ್ಮಿಮರಿಗೆ ಶಿಕ್ಷಣದಲ್ಲಿ ಶೇ.5%ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಈ ವರ್ಷ ಶಾಲೆಗಳ ಪ್ರವೇಶ ಪ್ರಾರಂಭವಾಗುವ ಮೊದಲು ಮೀಸಲಾತಿ ಕುರಿತು ‘ಸೂಕ್ತ ಕ್ರಮ’ ತೆಗೆದುಕೊಳ್ಳಲಾಗುವುದು: ನವಾಬ್ ಮಲಿಕ್

ಮುಸ್ಮಿಮರಿಗೆ ಶಿಕ್ಷಣದಲ್ಲಿ ಶೇ.5%ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಮಹಾರಾಷ್ಟ್ರ: ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ.5% ಮೀಸಲಾತಿಯನ್ನು ವಿಸ್ತರಿಸಲು ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪ್ರಸ್ತಾಪಿಸಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಶಾಸನವೊಂದನ್ನು ಅಂಗೀಕರಿಸುವ ಕುರಿತು ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ತಿಳಿಸಲಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಶುಕ್ರವಾರ ಹೇಳಿದ್ದಾರೆ.

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ  ಶೇ 5% ಮೀಸಲಾತಿ ನೀಡಲು ಹೈಕೋರ್ಟ್ ಅನುಮತಿ ನೀಡಿದೆ  ಎಂದು ತಿಳಿಸಿದ ಮಲಿಕ್, ಕಳೆದ ಸರ್ಕಾರ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಾವು ಎಚ್‌ ಸಿ ಆದೇಶವನ್ನು ಕಾನೂನಿನ ರೂಪದಲ್ಲಿ ಆದಷ್ಟು ಬೇಗ ಜಾರಿಗೊಳಿಸುತ್ತೇವೆ ಎಂದು ಘೋಷಿಸಿದರು.

ಈ ವರ್ಷ ಶಾಲಾ ಪ್ರವೇಶ ಪ್ರಾರಂಭವಾಗುವ ಮೊದಲು ಈ ನಿಟ್ಟಿನಲ್ಲಿ “ಸೂಕ್ತ ಕ್ರಮ” ತೆಗೆದುಕೊಳ್ಳಲಾಗುವುದು ಎಂದು ಮಲಿಕ್ ಹೇಳಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಕೋಟಾಕ್ಕಾಗಿ ಮಾತುಕತೆ ನಡೆಯುತ್ತಿದೆ ಎಂದು ಈ ಹಿಂದೆ ಜನವರಿಯಲ್ಲಿ ಮಲಿಕ್ ಖಚಿತಪಡಿಸಿದ್ದರು. ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕುರಿತು ತಿಳಿಸಲಾಗಿತ್ತು. ಕಳೆದ ನವೆಂಬರ್‌ ಎರಡು ಪಕ್ಷಗಳು ಶಿವಸೇನೆ ಜೊತೆಗೆ ನಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದವು.

ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರವು ಈ ವರ್ಷ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಲ್ಲಿ ಮರಾಠಾ ವಿದ್ಯಾರ್ಥಿಗಳಿಗೆ ಮೀಸಲಾತಿ ಒದಗಿಸಲು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಪ್ರಕಟಿಸಲು ಅನುಮೋದನೆ ನೀಡಿತು.

ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಜೂನ್‌ನಲ್ಲಿ ಎತ್ತಿಹಿಡಿದಿದೆ.