ಮಂಗಳೂರು ಗೋಲಿಬಾರ್: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ಮಂಗಳೂರು ಗೋಲಿಬಾರ್: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ಬೆಂಗಳೂರು : ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದರ ಹಿನ್ನಲೆ, ಇಂದು ವಿಚಾರಣೆ ನಡೆಸಿದ ಬಳಿಕ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ನಡೆದ ಸಿಎಎ ಪ್ರತಿಭಟನೆಯಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ ವೇಳೆ ಇಬ್ಬರು ಈ ದಾಳಿಯಲ್ಲಿ ಬಲಿಯಾಗಿದ್ದರು. ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಹೈಕೋರ್ಟ್ ಗೆ ಜೆ ಡಿ ಎಸ್ ಮುಖಂಡ ಮುಹಮ್ಮದ್ ಇಕ್ಪಾಲ್ ಮತ್ತು ಉಮರ್ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಎರಡು ಅಮಾಯಕ ಜೀವಗಳು ಬಲಿಯಾದವು ಮತ್ತು ಪೊಲೀಸರು ಪ್ರತಿಭಟನಾಕಾರರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರ ವಿರುದ್ದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆ ಡಿ ಎಸ್ ಮುಖಂಡ ಮುಹಮ್ಮದ್ ಇಕ್ಪಾಲ್ ಮತ್ತು ಉಮರ್ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು. ಪೋಲಿಸರು ನಡೆಸಿದ ಗೋಲಿಬಾರ್ ಸಂಬಂಧಿಸಿದಂತೆ ದಾಖಲೆಗಳನ್ನು ಇದೇ ತಿಂಗಳ 28ರೊಳಗೆ ಸಲ್ಲಿಸುವಂತೆ ತಿಳಿಸಿದೆ ಹಾಗೂ ಈ ಪ್ರಕರಣವನ್ನು ಫೆಬ್ರವರಿ 5ರಂದು ವಿಚಾರಣೆ  ನಡೆಸಲಾಗುವುದು ಎಂದು ಹೇಳಿದೆ.