ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ಕೊಲೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ಕೊಲೆ

ಬೆಂಗಳೂರು : ವೃದ್ದ ದಂಪತಿ ಕೊಲೆಯಾಗಿರುವ ಘಟನೆ ಕೋಣನಕುಂಟೆ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.
ಗೋವಿಂದಪ್ಪ(65),ಶಾಂತಮ್ಮ(55) ಕೊಲೆಯಾದ ದಂಪತಿಗಳೆಂದು ಗುರ್ತಿಸಲಾಗಿದೆ. ಗೋವಿಂದಪ್ಪನಿವೃತ್ತ ಸರ್ಕಾರಿ ನೌಕರರಾಗಿದ್ದನು.
ಕೊಲೆಯಾದ ವೃದ್ದ ದಂಪತಿ ಪುತ್ರನೊಂದಿಗೆ ವಾಸವಿದ್ದರು. ಘಟನಾ ಸ್ಥಳಕ್ಕೆ ಕೋಣನಕುಂಟೆ ಕುಂಟೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಕೌಟುಂಬಿಕ ಕಲಹದಿಂದ ಕೊಲೆ ನಡೆದಿರುಬಹುದು ಎಂದು ಪೊಲೀಸರು ಅನುಮಾನ ವ್ಯಕ್ತ ಪಡಿಸಿದ್ದಾರೆ.
ಸದ್ಯ ಈ ಸಂಬಂಧ 302ಕಾಯ್ದೆಡಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಮರೋಣೊತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.