ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಪ್ರಧಾನಿ ಮೋದಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಪ್ರಧಾನಿ ಮೋದಿ

ದೆಹಲಿ: ರಾಜಕೀಯ ಸ್ಥಿರತೆಗೆ ಬಂದಾಗ ಜನರು ಬಿಜೆಪಿಯನ್ನು ನಂಬುತ್ತಾರೆ ಎಂಬುದಕ್ಕೆ ಪುರಾವೆಯಾಗಿ ಕರ್ನಾಟಕ ಉಪಚುನಾವಣೆಯಲ್ಲಿ 15 ವಿಧಾನಸಭಾ ಸ್ಥಾನಗಳಲ್ಲಿ 12 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜನಾದೇಶವನ್ನು ಹಿಂಬಾಗಿಲಿನ ಮೂಲಕ ಕಳವು ಮಾಡಿದ್ದ ಕಾಂಗ್ರೆಸ್‌ಗೆ ಮತದಾರರು ಉಪಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ನಡೆದ ರ್ಯಾಲಿಯಲ್ಲಿ  ಮಾತನಾಡಿದ ಮೋದಿ, ಕರ್ನಾಟಕದ ಮತದಾರರು ಕಾಂಗ್ರೆಸ್-ಜೆಡಿಎಸ್ ಗೆ ತಕ್ಕ ಪಾಠ ಕಲಿಸಿದ್ದಾರೆ. ಇಂದಿನ ಉಪಚುನಾವಣೆ ಫಲಿತಾಂಶ ದೇಶದ ಎಲ್ಲಾ ರಾಜ್ಯಗಳಿಗೂ ಒಂದು ಸಂದೇಶ ನೀಡಿದೆ.  ರಾಜಕೀಯ ಸ್ಥಿರತೆಯ ಬಗ್ಗೆ ದೇಶವು ಏನು ಯೋಚಿಸುತ್ತದೆ ಮತ್ತು ರಾಜಕೀಯ ಸ್ಥಿರತೆಗಾಗಿ ದೇಶವು ಬಿಜೆಪಿಯನ್ನು ಎಷ್ಟು ನಂಬುತ್ತದೆ ಎಂಬ ಉದಾಹರಣೆ ಇಂದು ನಮ್ಮ ಮುಂದೆ ಇದೆ. ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಹೇಳಿದರು.

ಇಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 12 ಸ್ಥಾನಗಳನ್ನು ಗಳಿಸಿದ್ದರೆ, ಕಾಂಗ್ರೆಸ್ 2, ಇತರೆ 1, ಜೆಡಿಎಸ್‍ ಯಾವುದೇ ಸ್ಥಾನವನ್ನು ಗಳಿಸಲು ಸಾಧ್ಯವಾಗಿಲ್ಲ. ಇದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಭದ್ರವಾಗಿದೆ.