ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಹಾಯವಾಣಿ ಆರಂಭ; ಸುರೇಶ್ ಕುಮಾರ್

ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಹಾಯವಾಣಿ ಆರಂಭ; ಸುರೇಶ್ ಕುಮಾರ್

ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯಗಳನ್ನು ಆಲಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ  ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. 

 ಉಡುಪಿ ಜಿಲ್ಲೆ ಮಣೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸುರೇಶ್ ಕುಮಾರ್, ಮಾ.3 ರಿಂದ 247 ಉಚಿತ ಸಹಾಯವಾಣಿ  ಆರಂಭಿಸಲಾಗುವುದು.  ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ಸುಧಾರಣೆಗಳು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶಿಕ್ಷಕರು, ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು ಸಹಾಯವಾಣಿಯ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.