ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರ:ಇಂದು ಸಿದ್ದರಾಮಯ್ಯ-ಸೋನಿಯಾ ಗಾಂಧಿ ಭೇಟಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರ:ಇಂದು ಸಿದ್ದರಾಮಯ್ಯ-ಸೋನಿಯಾ ಗಾಂಧಿ ಭೇಟಿ

ದೆಹಲಿ:ಕೆಪಿಸಿಸಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನದ ಆಯ್ಕೆ ಸಂಬಂಧ ಚರ್ಚೆ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಉಪಚುನಾವಣೆಯ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಈಗ ಸ್ಥಾನ ಭರ್ತಿ ಮಾಡುವ ಸಂಬಂಧ ಸೋನಿಯಾಗಾಂಧಿ ಜೊತೆ ಚರ್ಚೆ ಮಾಡಲಿದ್ದಾರೆ.

ಇಂದು ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಜೊತೆ ಮಹತ್ವದ ಸಭೆ ನಡೆಸಲಿದ್ದು, ಸಿದ್ದು ಅಭಿಪ್ರಾಯ ಪರಿಗಣಿಸಿ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.