ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದ ಜಸ್ಪ್ರೀತ್ ಬುಮ್ರಾ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದ ಜಸ್ಪ್ರೀತ್ ಬುಮ್ರಾ

ದೆಹಲಿ: ಭಾರತದ ಪ್ರಧಾನ ವೇಗಿ ಜಸ್ಪ್ರೀತ್ ಬುಮ್ರಾ ಮಂಗಳವಾರ ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಬೆನ್ನಿನ ಮುರಿತದಿಂದಾಗಿ ಅವರ ಸ್ಥಾನಕ್ಕೆ ಉಮೇಶ್ ಯಾದವ್ ಆಯ್ಕೆ ಮಾಡಲಾಗಿದೆ.

ಬುಮ್ರಾ ಅವರ ವಿಕಿರಣಶಾಸ್ತ್ರದ ತಪಾಸಣೆಯ ಸಮಯದಲ್ಲಿ ಗಾಯ ಪತ್ತೆಯಾಗಿಪತ್ತೆಯಾಗಿದೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ. ಬುಮ್ರಾ ಈಗ ಬೆಂಗಳೂರಿನ ಎನ್‌ಸಿಎಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸಲಿದೆ. ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ಬುಮ್ರಾ ಬದಲಿಗೆ ಉಮೇಶ್ ಯಾದವ್ ಅವರ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. .

ಮೂರು ಪಂದ್ಯಗಳ ಸರಣಿಯು ಅಕ್ಟೋಬರ್ 2 ರಿಂದ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಗಲಿದೆ.