ಅವೈಜ್ಞಾನಿಕ ನೋಟು ಅಮಾನ್ಯೀಕರಣವೇ ಆರ್ಥಿಕತೆ ಕುಸಿತಕ್ಕೆ ಕಾರಣ: ಸಿದ್ದರಾಮಯ್ಯ

ಅವೈಜ್ಞಾನಿಕ ನೋಟು ಅಮಾನ್ಯೀಕರಣವೇ ಆರ್ಥಿಕತೆ ಕುಸಿತಕ್ಕೆ ಕಾರಣ: ಸಿದ್ದರಾಮಯ್ಯ

ರಾಯಚೂರು: ಭ್ರಷ್ಟಾಚಾರ ಹಾಗೂ ಕಪ್ಪು ಹಣ ತಡೆಯಲು ಮಾಡಿದ ನೋಟು ಅಮಾನ್ಯೀಕರಣದಿಂದ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರದ ದೂರದೃಷ್ಟಿಯಿಲ್ಲದ ನೋಟು ಅಮಾನ್ಯೀಕರಣ ಮತ್ತು ಸರಕು ಮತ್ತು ಸೇವಾ ತೆರಿಗೆಯಿಂದ ದೇಶದ ಆರ್ಥಿಕತೆ ಕುಸಿಯಲು ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿವಿಧ ವರ್ತಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಸಿದ್ದರಾಮಯ್ಯ ಅವರು, ತೆರಿಗೆ ಪದ್ಧತಿಯಲ್ಲಿ ಭಾರೀ ಸುಧಾರಣೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್ಟಿಯಿಂದ ಸಾಕಷ್ಟು ಸಮಸ್ಯೆಗಳಾಗಿವೆ. ಭ್ರಷ್ಟಾಚಾರ ಹಾಗೂ ಕಪ್ಪು ಹಣ ತಡೆಯಲು ಮಾಡಿದ ನೋಟು ಅಮಾನ್ಯೀಕರಣದಿಂದ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ದೂರದೃಷ್ಟಿಯಿಲ್ಲದ ಇಂತಹ ಕ್ರಮಗಳಿಂದ ದೇಶದ ಕೃಷಿಮತ್ತು ಕೈಗಾರಿಕಾ ಬೆಳವಣಿಗೆ ಕುಸಿದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೃಷಿ ಮತ್ತು ಕೈಗಾರಿಕೆ ಕುಸಿದಿದ್ದು ಸೇವಾ ವಲಯ ಮಾತ್ರ ಬೆಳವಣಿಗೆಯಾಗುತ್ತಿರುವ ಕಾರಣ ಜಿಡಿಪಿ ಸತತವಾಗಿ ಕುಸಿಯುತ್ತಿದೆ. ದೇಶದ ಅಭಿವೃದ್ಧಿಗೆ ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯ ಬೆಳವಣಿಗೆಯಾಗಬೇಕು.  ಇದಕ್ಕೆ ಅವೈಜ್ಞಾನಿಕ ಸರಕು ಮತ್ತು ಸೇವಾ ತೆರಿಗೆ ಮತ್ತು ನೋಟು ಅಮಾನ್ಯೀಕರಣವೇ ಕಾರಣ ಎಂದು ದೂರಿದರು.